Home ಟಾಪ್ ಸುದ್ದಿಗಳು ಟಿ20 ವಿಶ್ವಕಪ್ | 15 ಸದಸ್ಯರ ಟೀಮ್ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ಬುಮ್ರಾ ,ಪಟೇಲ್

ಟಿ20 ವಿಶ್ವಕಪ್ | 15 ಸದಸ್ಯರ ಟೀಮ್ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ಬುಮ್ರಾ ,ಪಟೇಲ್

ನವದೆಹಲಿ: ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವ ಕಪ್ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಗಾಯದ ಕಾರಣದಿಂದ ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿದಿದ್ದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ಹಿರಿಯ ಬೌಲರ್ ಮುಹಮ್ಮದ್ ಶಮಿ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ನಿರೀಕ್ಷೆಯಂತೆ ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕನ ಸ್ಥಾನ ವಹಿಸಲಾಗಿದೆ.

ಐಸಿಸಿ ಟಿ20 ವಿಶ್ವಕಪ್ 2022 ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್’ದೀಲ್ ಸಿಂಗ್.

ಹೆಚ್ಚುವರಿ ಆಟಗಾರರು

ಮುಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್ ಮತ್ತು ದೀಪಕ್ ಚಾಹರ್

Join Whatsapp
Exit mobile version