Home ಟಾಪ್ ಸುದ್ದಿಗಳು ಟಿ–20 ವಿಶ್ವಕಪ್ | ನಂದಿನಿ ಲಾಂಛನ ಇರುವ ಜೆರ್ಸಿ ಬಿಡುಗಡೆ ಮಾಡಿದ ಸ್ಕಾಟ್ಲೆಂಡ್

ಟಿ–20 ವಿಶ್ವಕಪ್ | ನಂದಿನಿ ಲಾಂಛನ ಇರುವ ಜೆರ್ಸಿ ಬಿಡುಗಡೆ ಮಾಡಿದ ಸ್ಕಾಟ್ಲೆಂಡ್

ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಮಹತ್ವದ ಹೆಜ್ಜೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಸಿಸಿ ಪುರುಷರ ಟಿ–20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ.

ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್ ಸ್ಕಾಟ್ಲೆಂಡ್ ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಜೆರ್ಸಿಯ ಬಲ ತೋಳಿನಲ್ಲಿ ನಂದಿನಿ ಲಾಂಛನವನ್ನು ಹಾಕಲಾಗಿದೆ. ನಂದಿನಿ ಎಂದು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಬರೆಯಲಾಗಿದೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿ, “ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ” ಎಂದು ಬಣ್ಣಿಸಿದ್ದಾರೆ. “ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ” ಎಂದು ಹೇಳಿದ್ದಾರೆ. “ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Join Whatsapp
Exit mobile version