ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದೆ.
ಸಿಡ್ನಿಯಲ್ಲಿ ನಿರ್ಣಾಯಕ ಪಂದ್ಯದ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್, ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಸಿಡ್ನಿಯ ಪಿಚ್ ಆರಂಭದಲ್ಲಿ ಬ್ಯಾಟರ್‌ಗಳ ಸಹಕಾರಿಯಾಗುವ ಸ್ವಭಾವ ಹೊಂದಿದ್ದು, ಇದರ ಲಾಭ ಕಿವೀಸ್ ಪಡೆದುಕೊಳ್ಳಲಿದಿಯೇ ಎಂಬುದನ್ನು ಕಾದು ನೋಡಬೇಕಿದೆ.
ಕಳೆದ ಪಂದ್ಯದಲ್ಲಿ ಆಡಿದ್ದ ಆಡುವ ಹನ್ನೊಂದರ ಬಳಗವನ್ನೇ ಉಭಯ ತಂಡಗಳು ಮಹತ್ವದ ಸೆಮಿಫೈನಲ್ ಪಂದ್ಯಕ್ಕೂ ಉಳಿಸಿಕೊಂಡಿದೆ.
ಉಭಯ ತಂಡಗಳ ಆಡುವ ಹನ್ನೊಂದರ ಬಳಗ
ಪಾಕಿಸ್ತಾನ : ಮುಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಬಾಬರ್ ಅಝಮ್ (ನಾಯಕ), ಮುಹಮ್ಮದ್ ನವಾಝ್, ಮುಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮುಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹಾರಿಸ್ ರೌಫ್, ಶಾಹೀನ್ ಅಫ್ರಿದಿ.
ನ್ಯೂಜಿಲೆಂಡ್ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.