9 ತಬ್ಲಿಘಿಗಳಿಗೆ 10 ವರ್ಷ ಭಾರತ ಭೇಟಿಗೆ ನಿರ್ಬಂಧ | ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ : ಕೋವಿಡ್ 19 ಆರಂಭದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಮಾಧ್ಯಮಗಳಲ್ಲಿ ಭಾರೀ ಅಪಪ್ರಚಾರಗೊಂಡ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 9 ವಿದೇಶಿ ತಬ್ಲಿಘಿ ಜಮಾತ್ ಸದಸ್ಯರಿಗೆ ಭಾರತಕ್ಕೆ ಭೇಟಿ ನೀಡದಂತೆ 10 ವರ್ಷ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

- Advertisement -

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಬ್ಬರು ವಿದೇಶಿ ತಬ್ಲಿಘಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಅಬ್ದುಲ್ ನಜೀರ್ ಮತ್ತು ನ್ಯಾ. ಸಂಜೀವ್ ಖನ್ನಾ ಪೀಠವು, ಭವಿಷ್ಯದಲ್ಲಿ ಅವರು ಭಾರತಕ್ಕೆ ಭೇಟಿ ನೀಡಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್ ತೀರ್ಪು ಪರಿಗಣಿಸದೆ, ಅವರ ಅರ್ಹತೆಯ ಆಧಾರದಲ್ಲಿ ವೀಸಾ ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

9 ತಬ್ಲಿಘಿಗಳಿಗೆ ಭಾರತಕ್ಕೆ 10 ವರ್ಷ ಭೇಟಿ ನೀಡುವುದಕ್ಕೆ ನಿರ್ಬಂಧ ಹೇರಿ ಹೈಕೋರ್ಟ್ ಆದೇಶಿಸಿತ್ತು. ಕೋವಿಡ್ 19 ಆರಂಭದ ವೇಳೆ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸಲು ಮತ್ತು ಸಮುದಾಯದ ವಿರುದ್ಧ ಅಪಪ್ರಚಾರ ನಡೆಸಲು ಭಾರತದ ಬಹುತೇಕ ಎಲ್ಲಾ ಮಾಧ್ಯಮಗಳು ತಬ್ಲಿಘಿಗಳ ಕಾರ್ಯಕ್ರಮವನ್ನು ದೊಡ್ಡದಾಗಿ ವಿವಾದಾತ್ಮಕಗೊಳಿಸಿದ್ದವು.  

Join Whatsapp