ನವದೆಹಲಿ: ತಹವ್ವುರ್ ಹುಸೇನ್ ರಾಣಾನ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 13ರವರೆಗೆ ವಿಸ್ತರಿಸಿ ಬುಧವಾರ ಆದೇಶಿಸಿದೆ.
ಈ ಹಿಂದೆ ನೀಡಲಾಗಿದ್ದ ಜುಲೈ 9ರ ಅವಧಿ ಇಂದಿಗೆ ಮುಗಿದಿತ್ತು. ಸದ್ಯ ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ರಾಣಾನನ್ನು ವಿಡಿಯೋ ಕಾನ್ಫ್ರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಸಂಚುಕೋರನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದರು.
