ಜೈಪುರ: ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಕೃತ್ಯಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಖಂಡನೆ ವ್ಯಕ್ತಪಡಿಸಿದ್ದು ಕನ್ಹಯ್ಯ ಅವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿ ಗೆಹಲೋತ್ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ, ಇದೊಂದು ಭಯೋತ್ಪಾದನೆಯ ಕೃತ್ಯ. ತನಿಖೆಯಲ್ಲಿ ವಿಳಂಬ ಮಾಡದೆ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸಂಯಮ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಘಟನೆಗೆ ಸಂಬಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ವು ತನಿಖೆ ನಡೆಸುತ್ತಿದೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ರಾಜಸ್ಥಾನ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣಾ ತಂಡ (ಎಸ್ಒಜಿ)ವು ಎನ್ಐಎ ಜೊತೆ ತನಿಖೆಗೆ ಸಹಕರಿಸುತ್ತಿವೆ ಎಂದು ಗೆಹಲೋತ್ ಹೇಳಿದ್ದಾರೆ.