ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನು ಪಿಕ್ ಪಾಕೆಟರ್ ಎಂದು ಕರೆದಿದ್ದಕ್ಕಾಗಿ ಹೀಗೆ ಸೂಚನೆ ನೀಡಿದೆ.
ಹೇಳಿಕೆಗಳು ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು ಕ್ರಮ ತೆಗೆದುಕೊಳ್ಳಲು ಸಾಂವಿಧಾನಿಕ ಸಂಸ್ಥೆಗೆ ಎಂಟು ವಾರಗಳ ಕಾಲಾವಕಾಶ ನೀಡಿತು.
ಇಂತಹ ಹೇಳಿಕೆಗಳು ಉತ್ತಮ ಅಭಿರುಚಿಯನ್ನು ಹೊಂದಿಲ್ಲ. ಚುನಾವಣಾ ಆಯೋಗವು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ನ್ಯಾಯಾಲಯ ವಿಷಯವನ್ನು ಬಾಕಿ ಇಡಲು ಉದ್ದೇಶ ಹೊಂದಿಲ್ಲ. ಅದನ್ನು ವಿಲೇವಾರಿ ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ರಾಹುಲ್ ಗಾಂಧಿ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನವೆಂಬರ್ 23ರಂದು ರಾಹುಲ್ ಗಾಂಧಿಗೆ ನೋಟಿಸ್ ನೀಡಿತ್ತು. ನವೆಂಬರ್ 26ರೊಳಗೆ ಉತ್ತರಿಸದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿತ್ತು. ಅದಕ್ಕೆ ರಾಹುಲ್ ಪ್ರತಿಕ್ರಿಯಿಸಲು ವಿಫಲಗೊಂಡಿದ್ದಾರೆ ಎಂದು ತಿಳಿಸಿದ ನ್ಯಾಯಾಲಯ, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನು ಪಿಕ್ ಪಾಕೆಟರ್ ಎಂದು ಕರೆದಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.