ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಕ್ರಮ ತೆಗೆದುಕೊಳ್ಳಿ: ಮೋದಿಗೆ ವರುಣ್ ಗಾಂಧಿ ಪತ್ರ

Prasthutha|

ನವದೆಹಲಿ : ಕೇಂದ್ರ ಸಚಿವ  ಅಜಯ್ ಮಿಶ್ರಾ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ವರುಣ್ ಗಾಂಧಿ ಪ್ರಧಾನಿ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪ್ರತಿಭಟನಾ ನಿರತ ರೈತರ ವಿರುದ್ಧದ ಎಲ್ಲಾ ರಾಜಕೀಯ ಪ್ರೇರಿತ ಸುಳ್ಳು ಎಫ್‌ ಐಆರ್ ಗಳನ್ನು ರದ್ದುಗೊಳಿಸಿ ಎಂದು ಒತ್ತಾಯಿಸಿದರು. ಅಲ್ಲದೆ ಲಖಿಂಪುರ ಖೇರಿ ಘಟನೆ ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದ್ದು, ಈ ಸಂಬಂಧ ಕೇಂದ್ರ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರುಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



Join Whatsapp