ಕೋವಿಡ್ ತಡೆಗಟ್ಟಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಸೂಚನೆ

Prasthutha|

ಮಡಿಕೇರಿ: ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ  ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಕೋವಿಡ್ ನಿಯಂತ್ರಣದ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು, ವಿರಾಜಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಮುಖ್ಯಾಧಿಕಾರಿಗಳ ಹಾಗೂ ಕೋವಿಡ್ ನೋಡಲ್ ಅಧಿಕಾರಿಗಳ ಸಮ್ಮಖದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಸಭಾಂಗಣ ಸಭೆ ನಡೆಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಜಿ.ಬೋಪಾಯ, ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಎಲ್ಲರೂ ಆಸಕ್ತಿ ತೋರಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

- Advertisement -

ಸಭೆಯಲ್ಲಿ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp