ದ್ವೇಷಪೂರಿತ ಹೇಳಿಕೆ ನೀಡಿರುವ ಶಾಸಕ ಪೂಂಜ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಿ: ಅಫ್ಸರ್ ಕೊಡ್ಲಿಪೇಟೆ

Prasthutha|

ಬೆಂಗಳೂರು: ದ್ವೇಷಪೂರಿತ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಿ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯು ಶಾಂತಿ, ಸೌಹಾರ್ದತೆಯ ಪರಂಪರೆಯ ಇತಿಹಾಸವನ್ನು ಹೊಂದಿರುವ ಜಿಲ್ಲೆಯಾಗಿರುತ್ತದೆ. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ಪಕ್ಷದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು “ಮುಸ್ಲಿಂ ಸಮುದಾಯದ ಧಾರ್ಮಿಕ ಕೇಂದ್ರಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಬೇಕಾಗುವಂತಹ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿರುತ್ತಾರೆ” ಎಂದು ದ್ವೇಷಪೂರಿತವಾದ ಹೇಳಿಕೆಗಳನ್ನು ನೀಡಿ, ಸಮಾಜದ ಸ್ವಾಸ್ಥ್ಯ ಕೆಡಿಸಿ, ಜನರಲ್ಲಿ ಭಯ ಮತ್ತು ಆತಂಕ ಸೃಷ್ಟಿಸುವ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರಿಂದ ಒಂದು ಸಮುದಾಯದ ಜನರನ್ನು ಕೆರಳಿಸಿ ಕೋಮು ಗಲಭೆ ಸೃಷ್ಟಿಸಿ, ಅದರಿಂದ ರಾಜಕೀಯ ಲಾಭವನ್ನು ಪಡೆಯುವ ಹುನ್ನಾರ ಎಂಬುದು ಎದ್ದು ಕಾಣುತ್ತಿದೆ. ಹಾಗಾಗಿ ಇಂತಹ ದ್ವೇಷಪೂರಿತ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಪೊಲೀಸರಲ್ಲಿ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.


ಕೆಲವು ದಿನಗಳ ಹಿಂದೆ ಇದೇ ಹರೀಶ್ ಪೂಂಜಾ, ತನ್ನ ಸಹಚರರು ಅಕ್ರಮ ಕ್ವಾರಿ ಗಣಿಗಾರಿಕೆ,ಅಕ್ರಮ ಸ್ಫೋಟಕ ದಾಸ್ತಾನುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಅರೆಸ್ಟ್ ಆದಾಗ, ಪೊಲೀಸ್ ಸ್ಟೇಶನ್ ಗೆ ನುಗ್ಗಿ ಪೋಲೀಸು ಅಧಿಕಾರಿಗಳಿಗೆ ಆವಾಜ್ ಹಾಕಿ, ಕೇಸು ಹಾಕಿಸಿ ಕೊಂಡ ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯದಿಂದಲೇ ತನ್ನನ್ನು ಬೈಸಿಕೊಂಡಿದ್ದರೂ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೇಳಿದ್ದಾರೆ.

Join Whatsapp