ಮಸೀದಿಗಳ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ; ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಅನ್ವರ್ ಸಾದತ್

Prasthutha|

ಮಂಗಳೂರು: ವಿಜಯೋತ್ಸವದ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಸೀದಿಗಳ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿ ದೊಡ್ಡ ಗಲಭೆಗೆ ಪ್ರಯತ್ನ ಪಡುತ್ತಿದ್ದಾರೆ. ಸರ್ಕಾರ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ಅನ್ವರ್ ಸಾದತ್ ಬಜತ್ತೂರು ಆಗ್ರಹಿಸಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ಮಾಡಿರುವ ಅವರು, ವಿಜಯೋತ್ಸವದ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಸೀದಿಗಳ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿ ದೊಡ್ಡ ಗಲಭೆಗೆ ಪ್ರಯತ್ನ ಪಡುತ್ತಿದ್ದಾರೆ ಕೆಲವು ದಿನಗಳ ಹಿಂದೆ ಕರೋಪಾಡಿಯಲ್ಲಿ ನಡೆದ ರೀತಿಯಲ್ಲಿ ಇಂದು ಬೋಳಿಯಾರ್ ಮಸೀದಿ ಮುಂಭಾಗದಲ್ಲಿ ನಡೆದಿದೆ, ಸರಕಾರ, ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಪರಿಸ್ಥಿತಿ ಕೈ ಮೀರುವ ಮುನ್ನ ಅನಾಹುತವನ್ನು ತಪ್ಪಿಸಬೇಕು ಮತ್ತು ಸಂಘಪರಿವಾರದ ಕಿಡಿಗೇಡಿಗಳ ಮೇಲೆ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Join Whatsapp