ಪುನೀತ್ ಗೆ ‘ಕರ್ನಾಟಕ ರತ್ನ’ ಗೌರವ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ಎಂದ ಬೊಮ್ಮಾಯಿ

Prasthutha|

ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

- Advertisement -

ಬೆಂಗಳೂರು: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕೆಂಬ ಅಭಿಮಾನಿಗಳಿಂದ ಒತ್ತಾಯ ಹೆಚ್ಚುತ್ತಿರುವುದು ನಿಜ. ಈ ಬೇಡಿಕೆ ಕುರಿತು ತಕ್ಷಣದಲ್ಲೇ ಏನನ್ನೂ ಹೇಳಲಾಗದು. ಪ್ರಮುಖರ ಜೊತೆ ಚರ್ಚಿಸುತ್ತೇನೆ ಎಂದರು.

- Advertisement -


ಇದೇ ವಿಷಯಕ್ಕೆ ಸಂಬಂಧಿಸಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿ, ಪುನೀತ್ ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಇದೆ. ಆದರೆ ನಿಯಮಾವಳಿ ಹಾಗೂ ನ್ಯಾಯಾಲಯದ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅವಕಾಶವಿಲ್ಲ. ಆದ್ದರಿಂದ ಪುನೀತ್ ಹೆಸರನ್ನು ಈ ಬಾರಿ ಪರಿಗಣಿಸಿಲ್ಲ. ಪುನೀತ್ ಅವರು ಸರ್ಕಾರದ ಹಲವು ಜಾಹೀರಾತುಗಳಲ್ಲಿ ಉಚಿತವಾಗಿ ನಟಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಮುಂದೆ ಯಾವ ರೀತಿ ಗೌರವ ಸಲ್ಲಿಸಬೇಕು ಎಂಬುದನ್ನು ಸರ್ಕಾರ ತೀರ್ಮಾನಿಸಲಿದೆ ಎಂದರು.

Join Whatsapp