ತಲಪಾಡಿ: ಬೈಕ್ ಡಿವೈಡರ್ ಗೆ ಡಿಕ್ಕಿ, ಇಬ್ಬರು ಯುವಕರು ಸಾವು

Prasthutha|

ತಲಪಾಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ತಡ ರಾತ್ರಿ ತಲಪಾಡಿ ಕೆ.ಸಿ.ರೋಡ್ ನಲ್ಲಿ ನಡೆದಿದೆ.

- Advertisement -


ಕೆ.ಪ್ರಜಿತ್(23) ಮತ್ತು ಕೃಷ್ಣ ಪ್ರಸಾದ್ (25) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.


ದಸರಾ ಹಿನ್ನೆಲೆಯಲ್ಲಿ ಯವಕರು ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆ.ಸಿ. ರೋಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

Join Whatsapp