Home ಟಾಪ್ ಸುದ್ದಿಗಳು ರಾಜ್ಯದ 30 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣ: ಸಚಿವ ಆರ್.ಅಶೋಕ್

ರಾಜ್ಯದ 30 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣ: ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ 30 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದ್ದು,  ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ನಿರ್ಮಾಣ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಶಾಸಕ ನಾಗನಗೌಡ ಕಂದಕೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 239 ತಾಲ್ಲೂಕುಗಳಿವೆ. ಇವುಗಳಲ್ಲಿ 30 ಹೊಸ ತಾಲ್ಲೂಕುಗಳ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ ಮೇಲೆ ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ಆಡಳಿತ ಸೌಧ ನಿರ್ಮಾಣ ಮಾಡುತ್ತೇವೆ ಎಂದರು.

ಈ ಹಿಂದೆ 172 ತಾಲ್ಲೂಕುಗಳಿದ್ದವು. ನಂತರ 50, ಬಳಿಕ 12 ಸೇರಿದಂತೆ ಒಟ್ಟು ಪ್ರಸ್ತುತ 230 ತಾಲ್ಲೂಕುಗಳಿವೆ. ಎರಡು ವರ್ಷ ಕೋವಿಡ್ ಕಾರಣ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಕುಸಿದುಬಿದ್ದಿವೆ. ಹೀಗಾಗಿ ಹೊಸ ಯೋಜನೆಗಳಿಗೆ ಆರ್ಥಿಕ ಇಲಾಖೆ ನಿರ್ಬಂಧ ಹಾಕಿದೆ. ಆದರೂ ಹಿಂದುಳಿದ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ಅಗತ್ಯವಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬಹುದು ಎಂದು ತಿಳಿಸಿದರು.

Join Whatsapp
Exit mobile version