ಉಡುಪಿ: ಹುಟ್ಟುಹಬ್ಬಕ್ಕೆ ತಲ್ವಾರ್ ನಲ್ಲಿ ಕೇಕ್ ಕತ್ತರಿಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಮತ್ತು ಶರತ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಕಳೆದ ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಲಾಗಿತ್ತು. ಈ ವೀಡಿಯೋವನ್ನು ಯುವಕರೇ ಸಾಮಾಜಿಕ ಜಾಲತಾಣಲ್ಲಿ ಹರಿಯ ಬಿಟ್ಟಿದ್ದರು. ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಉಡುಪಿ ಎಸ್ ಪಿ ವಿಷ್ಣುವರ್ಧನ್ ಅವರಿಗೆ ಉನ್ನತ ಅಧಿಕಾರಿಗಳು ಸೂಚಿಸಿದ್ದರು.
ತಲವಾರಿನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಏಳು ಮಂದಿ ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ತಲವಾರ್ ಹಿಡಿದ ನಿರಂಜನ್ ಶೆಟ್ಟಿಗಾರ್ ಪರಾರಿಯಾಗಿದ್ದಾನೆ. ಪ್ರಸ್ತುತ ಪೊಲೀಸರು ತನುಜ್, ಸೂರಜ್ ಹಾಗೂ ಅನಿಶ್ ಬಂಧನಕ್ಕೆ ಬಲೆಬೀಸಿದ್ದಾರೆ.
ಉಡುಪಿ | ಕೇಕ್ ಕಟ್ ಗೆ ತಲ್ವಾರ್: ಮೂವರು ಅಂದರ್ !
Prasthutha|