ಶಾಸಕ ಪ್ರದೀಪ್ ಈಶ್ವರ್ ಕಚೇರಿ ಎದುರು ತಮಟೆ ಚಳವಳಿ

Prasthutha|

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನೀರಾವರಿ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು, ರೈತ ಸಂಘದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ತಾಲ್ಲೂಕು ಕಚೇರಿ ಆವರಣದಲ್ಲಿರುವ ಶಾಸಕರ ಕಚೇರಿ ಎದುರು ತಮಟೆ ಚಳವಳಿ ನಡೆಸಿದ್ದಾರೆ.

- Advertisement -

ಇತ್ತೀಚೆಗೆ ನೀರಾವರಿ ಹೋರಾಟ ಸಮಿತಿಯು ನಡೆಸಿದ ದುಂದು ಮೇಜಿನ ಸಭೆಯಲ್ಲಿ ಡಿ.1ರಂದು ಮೂರು ಜಿಲ್ಲೆಯ ಎಲ್ಲ ಶಾಸಕರ ಕಚೇರಿ ಎದುರು ತಮಟೆ ಚಳವಳಿ ನಡೆಸಿ ಅವರಿಗೆ ನೀರಾವರಿ ಸಮಸ್ಯೆಗಳ ಮಾಹಿತಿ ನೀಡಬೇಕು ಎಂದು ತೀರ್ಮಾನ ನಾಡಲಾಗಿತ್ತು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಲಕ್ಷ್ಮಿನಾರಾಯಣ್, ನೀರಿಗಾಗಿ ನಮ್ಮ ಹೋರಾಟ ಮತ್ತೆ ಆರಂಭವಾಗಿದೆ. ಎಷ್ಟೇ ಹೋರಾಟಗಳನ್ನು ನಡೆಸಿದರೂ ನೀರಾವರಿ ಯೋಜನೆಗಳು ಆಮೆಗತಿಯಲ್ಲಿ ಸಾಗುತ್ತಿದೆ. ಈ ನಿಧಾನಗತಿಯನ್ನು ಖಂಡಿಸುತ್ತಿದ್ದೇವೆ ಎಂದರು. ಬಯಲು ಸೀಮೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಇಲ್ಲ. ಕೊಳಚೆ ನೀರನ್ನು ನೀಡುತ್ತಿದ್ದಾರೆ. ಎಚ್‌.ಎನ್.ವ್ಯಾಲಿ ಮತ್ತು ಕೆ.ಸಿ.ವ್ಯಾಲಿ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸಬೇಕು ಎಂದು ಹೋರಾಟ ಮಾಡಿದರೂ ಸರ್ಕಾರಗಳು ಗಮನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು ಎಂದು ಶಾಸಕರಿಗೆ ಮನವಿ ನೀಡುತ್ತಿದ್ದೇವೆ. ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ ಅವರಿಗೆ ಗುರುವಾರ ಮನವಿ ನೀಡಿದ್ದೇವೆ. ಇಲ್ಲಿನ ಶಾಸಕ ಪ್ರದೀಪ್ ಈಶ್ವರ್ ಅವರು ಗೈರಾಗಿದ್ದಾರೆ. ಅವರ ಬಗ್ಗೆ ನಮಗೆ ಆಶಾವಾದವಿದೆ. ಅವರು ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಬೇಕು ಎಂದು ಆಗ್ರಹಿಸಿದರು.



Join Whatsapp