ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

Prasthutha|

ಚೆನ್ನೈ : ಹೃದಯ ನಾಳದಲ್ಲಿ ರಕ್ತ ಸಂಚಾರದ ತೊಂದರೆಯುಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್ ಚೆನ್ನೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

- Advertisement -

ಗಂಭೀರ ಪರಿಸ್ಥಿತಿಯಲ್ಲಿದ್ದ ವಿವೇಕ್ ಅವರು ಆಂಜಿಯೋಪ್ಲಾಸ್ಟಿ ಹಾಗೂ ಸ್ಟಂಟ್ ಅಳವಡಿಕೆಗಾಗಿ ವದಪಳನಿಯಲ್ಲಿರುವ ಎಸ್ ಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ 4:35ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

59 ವರ್ಷದ ವಿವೇಕ್ ಅವರಿಗೆ ಕೋವಿಡ್ ಸೋಂಕಿನ ಲಕ್ಷಣಗಳೇನೂ ಕಾಣಿಸಿಕೊಂಡಿರಲಿಲ್ಲ. ಆದರೆ ರಕ್ತದೊತ್ತಡದಲ್ಲಿ ಮಾತ್ರ ಕೊಂಚ ಏರುಪೇರಾಗಿತ್ತು. ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಎಸ್ ಐಎಂಎಸ್ ಆಸ್ಪತ್ರೆಯ ವರದಿ ತಿಳಿಸಿದೆ.

- Advertisement -

ಅವರು ಏಪ್ರಿಲ್ 15ರಂದು ಮೊದಲ ಕೋವಿಡ್ ಲಸಿಕೆಯನ್ನು ಪಡೆದಿದ್ದರು ಎನ್ನಲಾಗಿದೆ.

Join Whatsapp