ಚೆನ್ನೈ : ಕಾನೂನು ವಿದ್ಯಾರ್ಥಿಗೆ ಕಸ್ಟಡಿ ಚಿತ್ರಹಿಂಸೆ । 9 ಪೊಲೀಸರ ವಿರುದ್ಧ ಪ್ರಕರಣ ದಾಖಲು

Prasthutha|

ಚೆನ್ನೈ: ಕಾನೂನು ವಿದ್ಯಾರ್ಥಿಗೆ ಕಸ್ಟಡಿ ಚಿತ್ರಹಿಂಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಚೆನ್ನೈ ನ ಕೊಡುಂಗೈಯೂರ್ ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್ ಸೇರಿದಂತೆ ಒಂಬತ್ತು ಪೊಲೀಸ್ ಅಧಿಕಾರಿಗಳು ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -

ಕಳೆದ ವಾರ ಅಧಿಕಾರಿಗಳನ್ನು ಪ್ರಶ್ನಿಸಿದ್ದ ನೆಪದಲ್ಲಿ ಪೊಲೀಸ್ ಠಾಣೆಯೊಳಗೆ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಅಬ್ದುಲ್ ರಹೋಮ್ ಎಂಬಾತನ ಮೇಲೆ ಪೊಲೀಸ್ ಸಿಬ್ಬಂದಿ ವಿವಸ್ತ್ರಗೊಳಿಸಿ ಗಂಭೀರವಾಗಿ ಹಲ್ಲೆ ನಡೆಸಿದ್ದರು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರ ಆರೋಪವನ್ನು ರಹೀಮ್ ನಿರಾಕರಿಸಿದ್ದರು.

ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ವಿದ್ಯಾರ್ಥಿ ಅಬ್ದುಲ್ ರಹೀಮ್, ನನ್ನನ್ನು ವಿವಸ್ತ್ರಗೊಳಿಸಿದ ಪೊಲೀಸರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಆರೋಪಿಸಿದ್ದಾರೆ. ಮಾತ್ರವಲ್ಲ ಈ ರೀತಿ ಅಮಾನವೀಯವಾಗಿ ವರ್ತಿಸಿದ ಪೊಲೀಸರ ವಿರುದ್ಧ ಐಪಿಸಿ ಸೆಕ್ಷನ್ 326, 307 ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.

- Advertisement -

ಘಟನೆಯ ಕುರಿತು ವೀಡಿಯೋವೊಂದು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸಂತ್ರಸ್ತ ವಿದ್ಯಾರ್ಥಿಯನ್ನು ಮಾಸ್ಕ್ ಧರಿಸದ ಆರೋಪದಲ್ಲಿ ಪೊಲೀಸರು ಠಾಣೆಗೆ ಕೊಂಡೊಯ್ದು ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಚೆನ್ನೈ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ತನಿಖಾ ವರದಿಯ ಆಧಾರದಲ್ಲಿ ಒಂಬತ್ತು ಅಧಿಕಾರಿಗಳು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಈ ನಡುವೆ ಆರೋಪಿತ ಪೊಲೀಸರ ವಿರುದ್ಧ ಐಪಿಸಿ ಸೆಕ್ಷನ್ 294, 323 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.



Join Whatsapp