ನವದೆಹಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಿರುವ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ.
ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆಯಿದ್ದು ಝಡ್ ಶ್ರೇಣಿಗೆ ಭದ್ರತೆ ಹೆಚ್ಚಿಸಿರುವುದರಿಂದ ಸಿಆರ್’ಎಫ್’ನ ಒಟ್ಟು 33 ಕಮಾಂಡೋಗಳು ಅವರಿಗೆ ಭದ್ರತೆಯನ್ನು ನೀಡಲಿದ್ದಾರೆ. ಅಣ್ಣಾಮಲೈ ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಅವರಿಗೆ ಈ ಭದ್ರತೆ ನೀಡಲಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಿಗೆ ಮಾವೋವಾದಿಗಳು ಮತ್ತು ಕೋಮುವಾದಿಗಳಿಂದ ಬೆದರಿಕೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.
ಈ ಕುರಿತು ಐಬಿ ವರದಿ ಬಂದ ನಂತರ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಐಬಿಯ ಈ ವರದಿಯ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯವು ಲೋಕಸಭಾ ಸದಸ್ಯ ಚಿರಾಗ್ ಪಾಸ್ವಾನ್’ಗೆ ಕೂಡ ಝಡ್ ಶ್ರೇಣಿಯ ವಿಐಪಿ ಭದ್ರತೆಯನ್ನು ನೀಡಿದೆ.