ಚೆನ್ನೈ: ನಾಲ್ಕು ವಲಯಗಳಲ್ಲಿ ತಲಾ ಒಂದರಂತೆ ನಾಲ್ಕು ಒಲಿಂಪಿಕ್ ತರಬೇತಿ ಅಕಾಡೆಮಿಗಳು ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೇ, ರಾಜ್ಯಾದ್ಯಂತ ಕ್ರೀಡಾ ತರಬೇತಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಕ್ರೀಡಾಪಟುಗಳು ಮತ್ತು ಯುವಕರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಮಧ್ಯಮ ವರ್ಗದ ಮಕ್ಕಳಿಗೂ ಅನುಕೂಲವಾಗುವಂತೆ ಕ್ರೀಡಾ ಸೌಕರ್ಯಗಳನ್ನು ನಮ್ಮ ಸರ್ಕಾರ ಕಲ್ಪಿಸಲಿದೆ ಎಂದು ಹೇಳಿದರು.