ಯಜಮಾನಿಗೆ ಮಾಸಿಕ 1,000 ರೂ.: ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಚಾಲನೆ

Prasthutha|

ಕಾಂಚೀಪುರಂ: ಮನೆಯಜಮಾನಿಗೆ ಮಾಸಿಕ ₹1,000 ಆರ್ಥಿಕ ನೆರವು ನೀಡುವ ತಮಿಳುನಾಡಿನ ಡಿಎಂಕೆ ಸರ್ಕಾರದ ಪ್ರಮುಖ ಸಮಾಜ ಕಲ್ಯಾಣ ಯೋಜನೆಗೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಾಜಿ ಮುಖ್ಯಮಂತ್ರಿ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಚಾಲನೆ ನೀಡಿದರು.

- Advertisement -


ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ. ಹಲವು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್ಗಳನ್ನು ವಿತರಿಸುವ ಮೂಲಕ ಯೋಜನೆ ಆರಂಭಿಸಿದರು.