ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬುಧವಾರ ರಾಜ್ಯದಲ್ಲಿ ಮಾದಕವಸ್ತುಗಳ ಹಾವಳಿಯನ್ನು ತೊಡೆದುಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಡ್ರಗ್ಸ್ ಪೆಡ್ಲರ್ ಗಳಿಗೆ ಕುಮ್ಮಕ್ಕು ನೀಡದಂತೆ ಎಚ್ಚರಿಸಿದ್ದಾರೆ.
ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್ ಸ್ಟೆನ್ಸಸ್ (ಎನ್ ಡಿಪಿಎಸ್) ಕಾಯ್ದೆಯ ಅಡಿಯಲ್ಲಿ ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿ ತನ್ನ ಅಧಿಕೃತ ಸ್ಥಾನದ ಲಾಭವನ್ನು ಬಳಸಿಕೊಂಡು ಅಪರಾಧವನ್ನು ಮಾಡಿದರೆ ಹೆಚ್ಚಿನ ಶಿಕ್ಷೆಯನ್ನು ನೀಡಬೇಕಾಗುತ್ತದೆ. ಕಾನೂನಿನ ಅಂತಹ ಕಠಿಣ ನಿಬಂಧನೆಗಳನ್ನು ಅನ್ವಯಿಸುವ ಸನ್ನಿವೇಶವು ಉದ್ಭವಿಸುವುದಿಲ್ಲ ಎಂದು ತಾನು ಇನ್ನೂ ಭಾವಿಸಿದ್ದೇನೆ ಎಂದು ಹೇಳಿದರು.