ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ

Prasthutha|

ದೆಹಲಿ: ತಮಿಳುನಾಡಿನಿಂದ ವಿಲವಂಕೋಡ್ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕಿ ಎಸ್ ವಿಜಯಧರಣಿ ಅವರು ಶನಿವಾರ ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -


ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಸಿ ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ಬಿಜೆಪಿ ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಶಾಸಕಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.


ಬಿಜೆಪಿ ಸೇರಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್ನ ಭಾಗವಾಗಿದ್ದೇನೆ. ಈಗ ಬಿಜೆಪಿ ಸೇರುವ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಿಂದಾಗಿ ನಾನು ಕೂಡ ಬಿಜೆಪಿ ಸೇರಿದ್ದೇನೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸೋಣ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ಚೆನ್ನಾಗಿ ಬೆಳೆಸುತ್ತಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.



Join Whatsapp