ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಸಾಧ್ಯತೆಯಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಪಕ್ಷದ ಹಾಲಿ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದರೆ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ.