ಹಿಂದಿ ಹೇರಿಕೆಯನ್ನು ತಮಿಳುನಾಡು ಒಪ್ಪುವುದಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ

Prasthutha|

ಚೆನ್ನೈ: ಇಂಗ್ಲಿಷ್ ಭಾಷೆಗೆ ಹಿಂದಿಗೆ ಪರ್ಯಾಯವಾಗಬೇಕು, ಪ್ರಾದೇಶಿಕ ಭಾಷೆಗಳು ಬಳಕೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಯಾವುದೇ ಕಾರಣಕ್ಕೂ ನಾವು ಹಿಂದಿ ಹೇರಿಕೆಯನ್ನು ಒಪ್ಪಿಕೊಳ್ಳುವುದಿಲ್ಲ , ಅದನ್ನು ರಾಜ್ಯದಲ್ಲಿ ಅನುಮತಿಸುವುದಿಲ್ಲ ಎಂದಿದ್ದಾರೆ.

- Advertisement -


ಹಿಂದಿ ಹೇರಿಕೆ ವಿಚಾರದಲ್ಲಿ ತಮಿಳುನಾಡು ಬಿಜೆಪಿ ನಿರ್ಧಾರ ಸ್ಪಷ್ಟವಾಗಿದೆ. ಅಲ್ಲದೇ ತಮಿಳು ಭಾಷೆಯನ್ನು ಸಂಪರ್ಕ ಭಾಷೆಯನ್ನಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮೊದಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕು ಎಂದು ಅಣ್ಣಾಮಲೈ ಒತ್ತಾಯಿಸಿದ್ದಾರೆ. ಆಯಾ ರಾಜ್ಯಗಳ ಕನಿಷ್ಠ 10 ಶಾಲೆಗಳಲ್ಲಿ ಸಂಪೂರ್ಣವಾಗಿ ತಮಿಳಿನಲ್ಲಿ ಕಲಿಸುವಂತೆ ಕೇಳಿಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.


ತಮಿಳು ಭಾಷೆಯನ್ನು ಸಂಪರ್ಕ ಭಾಷೆಯಾಗಿಸಬೇಕು ಎಂದಿದ್ದ ಸಂಗೀತಕಾರ ಎ.ಆರ್ ರಹಮಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಹಮಾನ್ ಹೇಳಿದಂತೆ ಆದರೆ ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಆದರೆ, ಈ ನಿಟ್ಟಿನಲ್ಲಿ ನಾವೇನಾದರೂ ಪ್ರಯತ್ನಗಳನ್ನು ಮಾಡಿದ್ದೇವೆಯೇ? ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ.



Join Whatsapp