ತಮಿಳುನಾಡು: ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಆತ್ಮಹತ್ಯೆ ಪ್ರಕರಣ

Prasthutha|

ಚೆನ್ನೈ: ತಮಿಳುನಾಡಿನಲ್ಲಿ ಎರಡು ವಾರಗಳ ಅವಧಿಯಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ನಾಲ್ಕನೇ ಪ್ರಕರಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

ಮಂಗಳವಾರ ತಮಿಳುನಾಡಿನ ವಿರುಧ್‌ನಗರದ  ಅಯ್ಯಂಪಟ್ಟಿ ಗ್ರಾಮದಲ್ಲಿರುವ ಮನೆಯಲ್ಲಿ 17 ವರ್ಷದ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವಿರುಧ್‌ನಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

- Advertisement -

13 ಜುಲೈನಿಂದ ಈವರೆಗೆ 12ನೇ ತರಗತಿಯ ಇತರ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಮಿಳುನಾಡಿನಲ್ಲಿ ಆತಂಕಕ್ಕೆ ಕಾರಣವಾಗಿದೆ.

Join Whatsapp