ತಮಿಳುನಾಡಿನಲ್ಲಿ ಸರ್ಕಾರಿ ಕೆಲಸಕ್ಕೆ ತಮಿಳು ಭಾಷಾ ಪರೀಕ್ಷೆ ಕಡ್ಡಾಯ

Prasthutha: December 4, 2021

ಮಹಿಳಾ ಸ್ವ ಸಹಾಯ ಸಂಘಗಳ ಸಾಲ ಮನ್ನಾ !

ಚೆನ್ನೈ: ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಲ್ಲಿ ತಮಿಳು ಭಾಷೆ ವಿಷಯವನ್ನು ಕಡ್ಡಾಯಗೊಳಿಸಿ ತಮಿಳುನಾಡು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)  ಹಾಗೂ ಶಿಕ್ಷಕರ ನೇಮಕಾತಿ ಪರೀಕ್ಷೆಗಳಲ್ಲಿ ತಮಿಳು ಭಾಷೆ ವಿಷಯವನ್ನು ಕಡ್ಡಾಯಗೊಳಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಹೇಳಿದ್ದಾರೆ. ರಾಜ್ಯ ನೇಮಕಾತಿ ಮಂಡಳಿಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು, ತಮಿಳು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 40 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಹಿಳಾ ಸ್ವ ಸಹಾಯ ಸಂಘಗಳ ಸಾಲ ಮನ್ನಾ !

ಇದೇ ವೇಳೆ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಸಹಕಾರ ಸಂಘಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗಿದ್ದು, ಈ ಕುರಿತು ತಮಿಳುನಾಡು ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿದೆ. ಮಾರ್ಚ್ 2021ಕ್ಕೆ ಅನ್ವಯವಾಗುವಂತೆ ಸುಮಾರು 2,674.64 ಕೋಟಿ ರುಪಾಯಿ ಸಾಲ (ಅಸಲು ಹಾಗೂ ಬಡ್ಡಿಯನ್ನು ಸೇರಿಸಿ) ವನ್ನು ಮನ್ನಾ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!