ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯನ್ನು ಸಂಪುಟದಿಂದ ವಜಾ ಮಾಡಿದ ರಾಜ್ಯಪಾಲರು

Prasthutha|

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಸಂಪರ್ಕಿಸದೆಯೇ ಜೈಲಿನಲ್ಲಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ರಾಜ್ಯಪಾಲರ ಈ ವಿವಾದಾತ್ಮಕ ನಡೆಯನ್ನು ಡಿಎಂಕೆ ಸರ್ಕಾರ ತೀವ್ರವಾಗಿ ಖಂಡಿಸಿದೆ. ಬಾಲಾಜಿ ಅವರು ಉದ್ಯೋಗಕ್ಕಾಗಿ ನಗದು ಹಗರಣ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ.

ರಾಜಭವನದ ಅಧಿಕೃತ ಹೇಳಿಕೆಯಲ್ಲಿ, ಬಾಲಾಜಿ ಅವರು ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಮನಿ ಲಾಂಡರಿಂಗ್ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣದಿಂದ ಜಾರಿಗೆ ಬರುವಂತೆ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ಹೇಳಿದೆ.

- Advertisement -

ತಮಿಳುನಾಡು ಸರ್ಕಾರ ಈ ಕ್ರಮವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಈ ತಿಂಗಳ ಆರಂಭದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಬಾಲಾಜಿಯ ನ್ಯಾಯಾಂಗ ಬಂಧನವನ್ನು ಚೆನ್ನೈನ ನ್ಯಾಯಾಲಯವು ಜುಲೈ 12 ರವರೆಗೆ ವಿಸ್ತರಿಸಿದೆ.



Join Whatsapp