ತಮಿಳುನಾಡು: ಕೆಲಸ ಕಳೆದುಕೊಂಡ ಬಸ್ ಚಾಲಕಿಗೆ ಹೊಸ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

Prasthutha|

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

- Advertisement -


ಕಮಲ್ ಹಾಸನ್ ಅವರು ಶರ್ಮಿಳಾ ಅವರನ್ನು ಅವರ ಕುಟುಂಬದೊಂದಿಗೆ ಸೋಮವಾರ ಬೆಳಿಗ್ಗೆ ಅಲ್ವಾರ್ಪೇಟ್ನಲ್ಲಿರುವ ಅವರ ಚೆನ್ನೈ ಕಚೇರಿಗೆ ಆಹ್ವಾನಿಸಿ, ಹೊಸ ಕಾರು ಖರೀದಿಗೆ ಮತ್ತು ಉದ್ಯಮಿಯಾಗಿ ಅವರ ಪ್ರಯಾಣವನ್ನು ಮುಂದುವರಿಸಲು ಚೆಕ್ ಅನ್ನು ಹಸ್ತಾಂತರಿಸಿದರು.


ತಮ್ಮ ವಯಸ್ಸಿನ ಮಹಿಳೆಯರಿಗೆ ಉತ್ತಮ ಮಾದರಿಯಾಗಿರುವ ಶರ್ಮಿಳಾ ಅವರ ಬಗ್ಗೆ ಕೇಳಿದಾಗ ನನಗೆ ತುಂಬಾ ದುಃಖವಾಯಿತು. ಶರ್ಮಿಳಾ ಕೇವಲ ಚಾಲಕಿಯಾಗದೆ ಸಾವಿರಾರು ಶರ್ಮಿಳಾರನ್ನು ಸೃಷ್ಟಿಸಬೇಕು ಎಂದು ನಾನು ನಂಬುತ್ತೇನೆ. ಕಮಲ್ ಕಲ್ಚರಲ್ ಸೆಂಟರ್ ಶರ್ಮಿಳಾ ಅವರಿಗೆ ಉದ್ಯಮಿಯಾಗಿ ತಮ್ಮ ಪ್ರಯಾಣವನ್ನು ಪುನರಾರಂಭಿಸಲು ಹೊಸ ಕಾರನ್ನು ಉಡುಗೊರೆಯಾಗಿ ನೀಡಿತು ಎಂದು ಕಮಲ್ ಹಾಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -