ಅ.10ಕ್ಕೆ ತಮಿಳುನಾಡು – ಕರ್ನಾಟಕ ಗಡಿ ಬಂದ್: ವಾಟಾಳ್ ನಾಗರಾಜ್

Prasthutha|

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅಕ್ಟೋಬರ್ 10 ರಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು – ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

- Advertisement -


ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಕೆಆರ್ಎಸ್ಗೆ ಮೆರವಣಿಗೆ ನಡೆಸಲಿದ್ದೇವೆ. ಅಕ್ಟೋಬರ್ 10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ. ಅಂದು ಬೆಳಗ್ಗೆ 11 ಗಂಟೆಗೆ ಅತ್ತಿಬೆಲೆಯ ತಮಿಳುನಾಡು ಗಡಿ ಬಂದ್ ಮಾಡಿ ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.

Join Whatsapp