ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಮೂವರ ಶವ ಪತ್ತೆ

Prasthutha|

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -


ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ ಎಂದು ತಿಳಿದು ಬಂದಿದೆ.

Join Whatsapp