Home ಟಾಪ್ ಸುದ್ದಿಗಳು ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಮೂವರ ಶವ ಪತ್ತೆ

ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಮೂವರ ಶವ ಪತ್ತೆ

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ ಎಂದು ತಿಳಿದು ಬಂದಿದೆ.

Join Whatsapp
Exit mobile version