ತಮಿಳುನಾಡು | ಉಪ ಕುಲಪತಿ ನೇಮಿಸಲು ಅಧಿಕಾರ ನೀಡುವ ಮಸೂದೆ ಅಂಗೀಕಾರ

Prasthutha|

ಚೆನ್ನೈ: ರಾಜ್ಯದ ವಿವಿಧ ವಿಶ್ವವಿದ್ಯಾನಿಯಲಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ನಿರ್ಣಯವನ್ನು ತಮಿಳುನಾಡು ಅಸೆಂಬ್ಲಿಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

- Advertisement -

ರಾಜ್ಯ ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವ ಈ ಕ್ರಮವು ಪ್ರಸಕ್ತ ವಿಷಯದಲ್ಲಿ ರಾಜ್ಯಪಾಲರ ಮಾತಿಗೆ ಕಡಿವಾಣ ಹಾಕುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾನಿಲಯ ಶೋಧನಾ ಸಮಿತಿಯ ಶಿಫಾರಸುಗಳ ಆಧಾರದಲ್ಲಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

- Advertisement -

ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಮಸೂದೆ ಅಂಗೀಕಾರವನ್ನು ವಿರೋಧಿಸಿ ಸಭಾತ್ಯಾಗ ನಡೆಸಿದೆ. ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕೆ. ಸೆಲ್ವಪೆರುಂತಗೈ ಅವರು ಮಾಡಿದ ಟೀಕೆಯನ್ನು ಹೊರತುಪಡಿಸಿ ಪ್ರತಿಪಕ್ಷ ಪಿ.ಎಂ.ಕೆ ಮಸೂದೆಯನ್ನು ಬೆಂಬಲಿಸಿದೆ.

ತಮಿಳುನಾಡು ವಿಶ್ವವಿದ್ಯಾಲಯಗಳ ಕಾನೂನುಗಳಿಗೆ ತಿದ್ದುಪಡಿ ತರುವ ಮಸೂದೆಯನ್ನು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡೀ ಮಂಡಿಸಿದ ಬಳಿಕ ಭಾರತೀಯ ಜನತಾ ಪಕ್ಷದ ಶಾಸಕರು ಸದನದಿಂದ ಹೊರ ನಡೆದರು.

Join Whatsapp