ತಮಿಳುನಾಡು: ಬಿಜೆಪಿ ಮೈತ್ರಿಕೂಟ ಸೇರಿದ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ)

Prasthutha|

ಚೆನ್ನೈ: ಉತ್ತರ ತಮಿಳುನಾಡಿನಲ್ಲಿ ಪ್ರಭಾವಿ ಪಕ್ಷವಾದ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಬಿಜೆಪಿ ಮೈತ್ರಿಕೂಟ ಸೇರಿದೆ. ನಾವು ಬಿಜೆಪಿಯೊಂದಿಗೆ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ ಎಂದು ಪಿಎಂಕೆ ಸಂಸ್ಥಾಪಕ ಎಸ್. ರಾಮದಾಸ್ ಪಕ್ಷದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಘೋಷಿಸಿದ್ದಾರೆ ಎಂದು ಪಿಎಂಕೆ ಪ್ರಧಾನ ಕಾರ್ಯದರ್ಶಿ ವಡಿವೇಲ್ ರಾವಣನ್ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮದಾಸ್ ಮತ್ತು ಅವರ ಮಗ ಅನ್ಬುಮಣಿ ಒಟ್ಟಾಗಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸೇರುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಿಎಂಕೆ ಸ್ಪರ್ಧಿಸಲಿರುವ ಕ್ಷೇತ್ರಗಳ ಸಂಖ್ಯೆಯನ್ನು ಒಂದೆರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದರು.

ತಮಿಳುನಾಡಿನ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ, ಪಿಎಂಕೆ ಸಂಸ್ಥಾಪಕ ಎಸ್. ರಾಮದಾಸ್ ಭಾನುವಾರ ರಾತ್ರಿ ತಮ್ಮ ಪ್ರತಿನಿಧಿಯನ್ನು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರೊಂದಿಗೆ ಮೈತ್ರಿ ಮಾತುಕತೆ ಆರಂಭಿಸಲು ಕಳುಹಿಸಿದ್ದರು. ಅದರ ಮರುದಿನ ಈ ಬೆಳವಣಿಗೆ ನಡೆದಿದೆ.

- Advertisement -

ತನ್ನೊಂದಿಗೆ ಸೋಮವಾರ ಮೈತ್ರಿ ಮಾಡಿಕೊಳ್ಳಬಹುದೆಂದು ನಿರೀಕ್ಷೆಯಲ್ಲಿದ್ದ ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆಗೆ ಪಿಎಂಕೆಯ ಈ ನಿರ್ಧಾರ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

Join Whatsapp