ತಮಿಳುನಾಡು: ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

- Advertisement -


ಸೆಂಥಿಲ್ ಬಾಲಾಜಿ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿ, ಅರ್ಜಿ ವಜಾಗೊಳಿಸಿದೆ.

Join Whatsapp