Home ಟಾಪ್ ಸುದ್ದಿಗಳು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ಉದ್ರಿಕ್ತರಿಂದ ಶಾಲೆಗೆ ನುಗ್ಗಿ ದಾಂಧಲೆ, 15 ವಾಹನಗಳಿಗೆ ಬೆಂಕಿ, ಲಾಠಿಚಾರ್ಜ್

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ಉದ್ರಿಕ್ತರಿಂದ ಶಾಲೆಗೆ ನುಗ್ಗಿ ದಾಂಧಲೆ, 15 ವಾಹನಗಳಿಗೆ ಬೆಂಕಿ, ಲಾಠಿಚಾರ್ಜ್

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಬಳಿಯ ಚಿನ್ನ ಸೇಲಂನಲ್ಲಿರುವ ಖಾಸಗಿ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನಗೆ ಶಿಕ್ಷಕರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ನ್ನಲಾಗಿದೆ. ಈ ಘಟನೆಯನ್ನು ಖಂಡಿಸಿ ಪೋಷಕರು ಮತ್ತು ಗ್ರಾಮಸ್ಥರು ಶಾಲಾ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಹಿಂಸಾಚಾರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 7 ಮಂದಿ ಗಾಯಗೊಂಡಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ.

ತಮಿಳುನಾಡಿನ ಕಲ್ಲಕುರಿಚಿ ಬಳಿ ಶಾಲಾ ಬಾಲಕಿಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಏಕಾಏಕಿ ಪ್ರತಿಭಟನಕಾರರ ಸಂಖ್ಯೆ 2000ಕ್ಕೂ ಹೆಚ್ಚಾಯಿತು. ಆಗ ಪ್ರತಿಭಟನೆ ಹಿಂಸಾ ರೂಪ ಪಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.  ಪ್ರತಿಭಟನಕಾರರು ಚಿನ್ನಸೇಲಂನಲ್ಲಿರುವ ಶಾಲೆಯ ಆವರಣಕ್ಕೆ ನುಗ್ಗಿ, ಸಂಸ್ಥೆಯ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ ಗಳಿಗೆ ಬೆಂಕಿ ಹಚ್ಚಿದರು. 15ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ.  

 ಶಾಲಾ ಬಾಲಕಿಯ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.   

Join Whatsapp
Exit mobile version