ಮಂಗಳೂರು | ಗ್ಯಾಸ್ ಟ್ಯಾಂಕರ್-ಡೀಸೆಲ್ ಟ್ಯಾಂಕರ್ ಮುಖಾಮುಖಿ ಢಿಕ್ಕಿ

Prasthutha|

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಹೊಸ ಮಜಲು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಹೋಗುತಿತ್ತು. ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರು ಕಡೆಗೆ ಬರುತಿತ್ತು. ಈ ವೇಳೆ ಹೊಸಮಜಲು ಬಳಿ ಅಪಘಾತ ಸಂಭವಿಸಿದೆ.

- Advertisement -

ಎರಡೂ ಟ್ಯಾಂಕರ್ ಗಳ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

- Advertisement -