Home ಟಾಪ್ ಸುದ್ದಿಗಳು ಗೋವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಟಂಕೇಶ್ವರ್ ಬಂಧನ..!

ಗೋವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಟಂಕೇಶ್ವರ್ ಬಂಧನ..!

ಡೊಂಗರ್ ಗಢ: ಛತ್ತೀಸ್ ಗಢದ ಡೊಂಗರ್ ಗಢದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿಕೃತ ಕಾಮಿಯೊಬ್ಬ ಹಸುವಿನ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.


ಇದನ್ನು ನೋಡಿದ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.


ಟಂಕೇಶ್ವರ್ ಕನ್ವರ್ (25) ಎಂಬ ಯುವಕ ಸೋಮವಾರ (ಜುಲೈ 01) ತಡ ರಾತ್ರಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭದಲ್ಲಿ ಆತ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸಹಜ ಲೈಂಗಿಕ ಕ್ರಿಯೆ ಮತ್ತು ಪ್ರಾಣಿ ಹಿಂಸೆ ಮಾಡಿದ್ದಕ್ಕಾಗಿ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version