ಭಗವದ್ಗೀತೆ ಅಳವಡಿಕೆ ಕೊರೋನಾಗಿಂತ ಮಾರಕ | ಸರಕಾರದ ವಿರುದ್ಧ ತನ್ವೀರ್ ಸೇಠ್ ಕಿಡಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತಾಗಿರುವ ಚರ್ಚೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

- Advertisement -

ಇಂದು ಮಾದ್ಯಮಗಳೊಂದಿಗೆ ಮಾತನಾಡಿದ ತನ್ವೀರ್ ಸೇಠ್ ಸರಕಾರದ ಈ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ. ಇಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಎಂದು ಹೇಳಿದ್ದಾರೆ.

ಸರಕಾರಗಳು ಅಧಿಕಾರಕ್ಕೆ ಬಂದ ನಂತರ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು. ಇದೀಗಾಗಲೇ ಕೋವಿಡ್ ನಿಂದ ರಾಜ್ಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಸರ್ಕಾರ ಶಿಕ್ಷಣ ಬಿಟ್ಟು ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Join Whatsapp