Home ಟಾಪ್ ಸುದ್ದಿಗಳು ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಸಮೀರ್ ಹತ್ಯೆ ಪ್ರಕರಣ: ಪೊಲೀಸ್ ಕಮಿಷನರ್ ಹೇಳಿದ್ದೇನು?

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಸಮೀರ್ ಹತ್ಯೆ ಪ್ರಕರಣ: ಪೊಲೀಸ್ ಕಮಿಷನರ್ ಹೇಳಿದ್ದೇನು?

ಮಂಗಳೂರು: ಭಾನುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಡಪ್ಪರ ಸಮೀರ್ ಕೊಲೆ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ದ.ಕ ಜಿಲ್ಲಾ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಡಪ್ಪರ ಸಮೀರ್ ಮೇಲೆ 9 ಕೇಸ್ ಇದೆ. 2018ರಲ್ಲಿ ಟಾರ್ಗೆಟ್ ತಂಡದ ಇಲ್ಯಾಸ್ ಎಂಬ ರೌಡಿಶೀಟರ್ ಮನೆಗೆ ನುಗ್ಗಿ ಕೊಲೆ ಮಾಡಿದ್ದರು. ಆ ಕೇಸ್ ನಲ್ಲಿ ಸಮೀರ್ ಎ1 ಆರೋಪಿ ಎಂದು ತಿಳಿಸಿದ್ದಾರೆ.


ಜೂನ್ ತಿಂಗಳಲ್ಲಿ ಉಳ್ಳಾಲ ಪೊಲೀಸರು 399, 402 ಕೇಸ್ ಹಾಕಿ ಜೈಲಿಗೆ ಕಳುಹಿಸಿದ್ದರು. ಕೆಲ ದಿನಗಳ ಹಿಂದೆ ಸಮೀರ್ ಬಿಡುಗಡೆಯಾಗಿದ್ದರು.


ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಸಮೀರ್ ತನ್ನ ತಾಯಿ, ಪತ್ನಿ, ಮಕ್ಕಳೊಂದಿಗೆ ಕಾರಲ್ಲಿ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಸೆಂಟರ್ ವೊಂದಕ್ಕೆ ಉಪಾಹಾರಕ್ಕೆ ತೆರಳಿದ್ದ ವೇಳೆ ಮತ್ತೊಂದು ಕಾರಲ್ಲಿ ಹಿಂಬಾಲಿಸಿ ಬಂದ ತಂಡವೊಂದು ತಾಯಿಯ ಎದುರಲ್ಲೇ ಮಾರಕಾಸ್ತ್ರಗಳನ್ನ ಹಿಡಿದು ಅಟ್ಟಾಡಿಸಿದ್ದಾರೆ. ತಪ್ಪಿಸಿಕೊಳ್ಳಲು ಸಮೀರ್ ರೈಲ್ವೇ ಟ್ರ್ಯಾಕ್ ಕಡೆ ಓಡಿದಾಗ ದುಷ್ಕರ್ಮಿಗಳು ಆತನನ್ನ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ತಾವು ಬಂದಿದ್ದ ಸ್ವಿಫ್ಟ್ ಕಾರಿನಲ್ಲಿ ಪರಾರಿಯಾಗಿದ್ದರು.


ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 103 ಕೇಸ್ ದಾಖಲು ಮಾಡಿ ಮುಂದಿನ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Join Whatsapp
Exit mobile version