ರಾಜ್ಯದ ಅರಣ್ಯ ಶೇ.30ಕ್ಕೆ ಹೆಚ್ಚಿಸುವ ಗುರಿ: ಸಚಿವ ಉಮೇಶ ಕತ್ತಿ

Prasthutha|

ಬೆಂಗಳೂರು; ರಾಜ್ಯದಲ್ಲಿ ಪ್ರಸ್ತುತ ಶೇ.20ರಷ್ಟು ಅರಣ್ಯ ಪ್ರದೇಶವಿದೆ. ಈ ಪ್ರಮಾಣವನ್ನು ಶೇ.30ಕ್ಕೆ ಹೆಚ್ಚಿಸುವ ಗುರಿ ಇಟ್ಟು ಕೊಂಡಿದ್ದು, ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅರಣ್ಯ ಮತ್ತು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

- Advertisement -

ಬೆಂಗಳೂರು ನಗರದ ಕಬ್ಬನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ 67ನೇ ವನ್ಯಜೀವಿ ಸಪ್ತಾಹದ ಅಂಗವಾಗಿ “ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ” ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು,”ವನ್ಯಜೀವಿ ಹಾಗೂ ಕಾಡಿನ ರಕ್ಷಣೆಯ ಬಗ್ಗೆ ನಮ್ಮಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಬೇಕಿದೆ. ಕಾಡು ಉಳಿದರೆ ಮಾತ್ರ ನಾವು ನೆಮ್ಮದಿಯಿಂದ ಇರಲು ಸಾಧ್ಯ. ಕರ್ನಾಟಕ ಗಂಧದ ನಾಡು ಎಂಬ ಕೀರ್ತಿ ಹೊಂದಿದ್ದು, ಇದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅರಣ್ಯ ಇಲಾಖೆಯು ಕರ್ನಾಟಕವನ್ನು ಬರುವ ದಿನಗಳಲ್ಲಿ ದೇಶದಲ್ಲಿಯೇ ಅತೀ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ರಾಜ್ಯವನ್ನಾಗಿ ಮಾಡುವ ಗುರಿ ಇದೆ” ಎಂದು ತಿಳಿಸಿದರು.

“ಯುಗ, ಯುಗಗಳಿಂದ ಮಾನವ ವನ್ಯಜೀವಿಗಳ ಜೊತೆಗೆ ಸೌಹಾರ್ದ ಬಾಂಧವ್ಯವನ್ನು ಬೆಳೆಸಿಕೊಂಡೆ ಬಂದಿದ್ದಾನೆ. ಇಂದು ವನ್ಯಜೀವಿಗಳ ರಕ್ಷಣೆ ಅಗತ್ಯವಾಗಿದೆ. ವನ್ಯಜೀವಿಗಳ ಸಂರಕ್ಷಣೆಗೆ ಕಾಡು ಕೂಡಾ ಸುರಕ್ಷಿತವಾಗಿರಬೇಕು. ಆಗ ಮಾತ್ರ ನಮಗೆಲ್ಲಾ ಶುದ್ಧ ಗಾಳಿ, ಆಹಾರ, ನೀರು ಸಿಗುವುದಕ್ಕೆ ಸಾಧ್ಯ. ಆಯುರ್ವೇದದಲ್ಲಿ ಅರಣ್ಯದಲ್ಲಿ ಸಿಗುವ ವಿವಿಧ ಸಸ್ಯ ಸಂಕುಲ, ಹೂವು, ಹಣ್ಣುಗಳಲ್ಲಿರುವ ಔಷಧ ಗುಣಗಳ ಬಗ್ಗೆ ಮಹತ್ವ ತಿಳಿಸಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಅಳಿವಿನ ಅಂಚಿನಲ್ಲಿರುವ ಮೀನಿನ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಆ ನಂತರದಲ್ಲಿ ವನ್ಯಜೀವಿ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸಲು ಕಬ್ಬನ್ ಪಾರ್ಕ್ ನಿಂದ ಲಾಲ್ ಬಾಗ್ ವರೆಗಿನ ನಡಿಗೆಗೆ ಹಸಿರು ನಿಶಾನೆ ತೋರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್, ಜಂಟಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಂಜಯ್ ಮೋಹನ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.ಸಕಲೇಶಪುರ: ಬಸ್ಸೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿಯಾದ ಪರಿಣಾಮ ಪುಟ್ಟ ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಕಲೇಶಪುರ ಬಳಿ ನಡೆ

Join Whatsapp