ಟಾಟಾ ಏಸ್ – ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು

Prasthutha|

ರಾಯಚೂರು: ಟಾಟಾ ಏಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ನಡೆದಿದೆ.

- Advertisement -

ಇಸ್ಮಾಯಿಲ್(25), ಚನ್ನಬಸವ (26), ಅಂಬರೀಶ್ (20), ರವಿ( 21) ಮೃತರು ಎಂದು ಗುರುತಿಸಲಾಗಿದೆ.

ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp