Home ಟಾಪ್ ಸುದ್ದಿಗಳು ಟಾಟಾ ಏಸ್ – ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು

ಟಾಟಾ ಏಸ್ – ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು

ರಾಯಚೂರು: ಟಾಟಾ ಏಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ನಡೆದಿದೆ.

ಇಸ್ಮಾಯಿಲ್(25), ಚನ್ನಬಸವ (26), ಅಂಬರೀಶ್ (20), ರವಿ( 21) ಮೃತರು ಎಂದು ಗುರುತಿಸಲಾಗಿದೆ.

ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version