ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ

Prasthutha|

- Advertisement -

ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) ನಿಧನರಾಗಿದ್ದಾರೆ.

- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ರತನ್‌ ಟಾಟಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ರತನ್‌ ಟಾಟಾ ಅವರು ಡಿಸೆಂಬರ್ 28, 1937 ರಂದು ಭಾರತದ ಬಾಂಬೆಯಲ್ಲಿ ಜನಿಸಿದರು. ಕೇವಲ 10 ವರ್ಷದವನಾಗಿದ್ದಾಗ ಪೋಷಕರು ಬೇರ್ಪಟ್ಟ ನಂತರ ಅವರ ಅಜ್ಜಿಯ ಅರೈಕೆಯಲ್ಲಿ ಬೆಳೆದರು.

ರತನ್ ಟಾಟಾ ಅವರು ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ ವಾಸ್ತುಶಿಲ್ಪದಲ್ಲಿ ಪದವಿ ಪಡೆದರು. ನಂತರ, ಅವರು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೆಜ್‌ಮೆಂಟ್‌ ಓದಿದರು. 1961 ರಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ರತನ್‌ ಟಾಟಾ ಆರಂಭದಲ್ಲಿ ಕೆಳ ಹಂತದ ಕೆಲಸ ಮಾಡಿದರು. ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್‌ ಕಂಪನಿಯಲ್ಲಿ ಸಹಾಯಕರಾಗಿ ಕೆಲಸ ಮಾಡಿದರು. 1991ರಲ್ಲಿ ರತನ್ ಟಾಟಾ ಅವರು ಟಾಟಾ ಸಮೂಹದ ಅಧ್ಯಕ್ಷರಾದರು. ಟಾಟಾ ಅವರ ನಾಯಕತ್ವದಲ್ಲಿ, ಸಮೂಹವು ಜಾಗತಿಕ ಮಾರುಕಟ್ಟೆಗಳಿಗೆ ವಿಸ್ತರಿಸಿತು.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮೋದಿ, ರತನ್ ಟಾಟಾ ಅವರು ದೂರದೃಷ್ಟಿಯ ಉದ್ಯಮಿ. ಸಹಾನುಭೂತಿಯುಳ್ಳ ಆತ್ಮ ಮತ್ತು ಅಸಾಧಾರಣ ಮನುಷ್ಯ. ಅವರು ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರತಿಷ್ಠಿತ ವ್ಯಾಪಾರ ಸಂಸ್ಥೆಗಳಿಗೆ ಸ್ಥಿರ ನಾಯಕತ್ವವನ್ನು ನೀಡಿದರು ಎಂದು ಸ್ಮರಿಸಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ರತನ್ ಟಾಟಾ ದೂರದೃಷ್ಟಿ ಹೊಂದಿದ ವ್ಯಕ್ತಿ. ಅವರು ವ್ಯಾಪಾರ ಮತ್ತು ಲೋಕೋಪಕಾರ ಎರಡರಲ್ಲೂ ಶಾಶ್ವತವಾದ ಗುರುತು ಬಿಟ್ಟಿದ್ದಾರೆ. ಅವರ ಕುಟುಂಬ ಮತ್ತು ಟಾಟಾ ಸಮುದಾಯಕ್ಕೆ ನನ್ನ ಸಂತಾಪಗಳು ಎಂದು ಪೋಸ್ಟ್‌ ಹಾಕಿ ದುಃಖ ವ್ಯಕ್ತಪಡಿಸಿದ್ದಾರೆ.



Join Whatsapp