ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

Prasthutha|

ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.

- Advertisement -

ಇದರೊಂದಿಗೆ 8 ರಾಜ್ಯಗಳಿಗೂ ರಾಜ್ಯಪಾಲರನ್ನು ನೇಮಿಸಲಾಗಿದೆ.

ಮಿಜೋರಾಂ ರಾಜ್ಯಪಾಲರಾಗಿರುವ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ, ಹರ್ಯಾಣ ರಾಜ್ಯಪಾಲರಾಗಿರುವ ಸತ್ಯದೇವ್ ನಾರಾಯಣ ಆರ್ಯ ಅವರನ್ನು ತ್ರಿಪುರಾ ರಾಜ್ಯಪಾಲರಾಗಿ, ತ್ರಿಪುರಾ ರಾಜ್ಯಪಾಲರಾಗಿದ್ದ ರಮೇಶ್ ಬೈಸ್ ಅವರನ್ನು ಜಾರ್ಖಂಡ್ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

- Advertisement -

ಕರ್ನಾಟಕ ರಾಜ್ಯಪಾಲರಾಗಿ ಕೇಂದ್ರ ಸಾಮಾಜಿಕ ಮತ್ತು ನ್ಯಾಯ, ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಿಸಲಾಗಿದೆ.

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಹರ್ಯಾಣ ರಾಜ್ಯಪಾಲರಾಗಿ ವರ್ಗ ಮಾಡಲಾಗಿದೆ. ಮಿಜೋರಾಮ್ ರಾಜ್ಯಪಾಲರಾಗಿ ಡಾ.ಹರಿ ಬಾಬು ಕಂಭಮ್ ಪತಿ, ಮಧ್ಯಪ್ರದೇಶ ರಾಜ್ಯಪಾಲರಾಗಿ ಮಂಗುಭಾಯಿ ಪಟೇಲ್, ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ನೇಮಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.



Join Whatsapp