ನವದೆಹಲಿ: ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ ಹಾಗೂ ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ದೂರಿದ್ದಾರೆ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಆದಾಯ ತೆರಿಗೆ (ಐ.ಟಿ) ಇಲಾಖೆಯಿಂದ ಹೊಸದಾಗಿ ₹ 1,823 ಕೋಟಿ ಮೊತ್ತದ ನೋಟಿಸ್ ಬಂದಿದೆ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ವಿರೋಧ ಪಕ್ಷಗಳನ್ನು ಹಣಿಯಲು ಬಿಜೆಪಿಯು ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯು ಐಟಿ ಕಾನೂನುಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ. ಅದಕ್ಕಾಗಿ ಇಲಾಖೆಯು ₹ 4,600 ಕೋಟಿಗಿಂತಲೂ ಹೆಚ್ಚಿನ ಡಿಮ್ಯಾಂಡ್ ನೋಟಿಸ್ ಅನ್ನು ಆ ಪಕ್ಷಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.