ನವದೆಹಲಿ: ಟಿಡಿಪಿ ಹಾಗೂ ಬಿಜೆಪಿ ಮೈತ್ರಿ ಯಾವುದೇ ಕ್ಷಣದಲ್ಲಿ ಸಂಭವಿಸಬಹುದು ಎಂದು ವೈಎಸ್ಆರ್ಸಿಪಿ ಸಂಸದ ಕೆ ರಘುರಾಮ ಕೃಷ್ಣರಾಜು ಹೇಳಿದ್ದಾರೆ.
ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಕೃಷ್ಣರಾಜು ಈ ಹೇಳಿಕೆ ನೀಡಿದ್ದಾರೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಯಲಿದ್ದು, ಈ ಭೇಟಿ ನಾಯ್ಡು ಅವರು ಮತ್ತೆ ಎನ್ಡಿಎಗೆ ಜೊತೆ ಕೈಜೋಡಿಸಲಿದ್ದಾರೆಯೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ.