ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

Prasthutha|

ವಿಜಯವಾಡ: ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿಯಾಗಿ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದಾರೆ.

- Advertisement -


ಜನಸೇನಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಿರಾಸೆ ಮೂಡಿಸಿರುವ ಪವನ್ ಕಲ್ಯಾಣ್ ತಮ್ಮ ಪಕ್ಷವು 24 ವಿಧಾನಸಭೆ ಮತ್ತು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ ಎಂದು ಶನಿವಾರ ಘೋಷಿಸಿದ್ದಾರೆ.


ಮೊದಲ ಪಟ್ಟಿಯಂತೆ 94 ಕ್ಷೇತ್ರಗಳಲ್ಲಿ ಟಿಡಿಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು , 24 ಸ್ಥಾನಗಳಲ್ಲಿ ಜನಸೇನಾ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಟಿಡಿಪಿ-ಜನಸೇನಾ ಮೈತ್ರಿ ಕುರಿತು ಉಂಡವಲ್ಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಈ ಒಕ್ಕೂಟವು ರಾಜ್ಯದ ಭವಿಷ್ಯಕ್ಕಾಗಿ. ಉತ್ತಮ ಕಾರ್ಯಕ್ಕೆ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.



Join Whatsapp