Home ಟಾಪ್ ಸುದ್ದಿಗಳು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ವಿಜಯವಾಡ: ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿಯಾಗಿ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದಾರೆ.


ಜನಸೇನಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಿರಾಸೆ ಮೂಡಿಸಿರುವ ಪವನ್ ಕಲ್ಯಾಣ್ ತಮ್ಮ ಪಕ್ಷವು 24 ವಿಧಾನಸಭೆ ಮತ್ತು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ ಎಂದು ಶನಿವಾರ ಘೋಷಿಸಿದ್ದಾರೆ.


ಮೊದಲ ಪಟ್ಟಿಯಂತೆ 94 ಕ್ಷೇತ್ರಗಳಲ್ಲಿ ಟಿಡಿಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು , 24 ಸ್ಥಾನಗಳಲ್ಲಿ ಜನಸೇನಾ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಟಿಡಿಪಿ-ಜನಸೇನಾ ಮೈತ್ರಿ ಕುರಿತು ಉಂಡವಲ್ಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಈ ಒಕ್ಕೂಟವು ರಾಜ್ಯದ ಭವಿಷ್ಯಕ್ಕಾಗಿ. ಉತ್ತಮ ಕಾರ್ಯಕ್ಕೆ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version