ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿರುವಂತಹ ಘಟನೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿದೆ.
ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354(A), 354(D), 504ರಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿದೆ.
ಅಷ್ಟೇ ಅಲ್ಲದೇ ಮನೆಗೆ ಬಂದರೆ ಮಾತ್ರ ಶಾಲೆಯ ದಿನವಹಿ ದಾಖಲಾತಿ ನೀಡಲಾಗುವುದೆಂದು ಹೇಳಿರುವುದಾಗಿ ಆರೋಪಿಸಲಾಗಿದೆ. ಶಿಕ್ಷಕಿ ಹೋದ ಕಡೆಯೆಲ್ಲಾ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಸಹೋದ್ಯೋಗಿಯಿಂದ ನೊಂದು ಸಹ ಶಿಕ್ಷಕಿ ಪೊಲೀಸರ ಮೊರೆ ಹೋಗಿದ್ದು, ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ಆರ್.ರಂಗಧಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.